ಹಿಂದೆ ಹೇಗೆ ಚಿಮ್ಮುತಿತ್ತು !
ರಚನೆ - ಎನ್ . ಎಸ್ . ಲಕ್ಷ್ಮಿನಾರಾಯಣ ಭಟ್ಟ
ಗಾಯಕರು - ಸಿ . ಎಸ್ . ಅಶ್ವಥ್
ಹಿಂದೆ ಹೇಗೆ ಚಿಮ್ಮುತಿತ್ತು
ಕಣ್ಣ ತುಂಬ ಪ್ರೀತಿ !
ಈಗ ಯಾಕೆ ಜ್ವಲಿಸುತ್ತಿದೆ
ಏನೋ ಶಂಕೆ ಭೀತಿ !
ಜೇನು ಸುರಿಯುತಿತ್ತು ನಿನ್ನ
ದನಿಯ ಧಾರೆಯಲ್ಲಿ,
ಕುದಿಯುತಿದೆ ಈಗ ವಿಷ
ಮಾತು ಮಾತಿನಲ್ಲಿ.
ಒಂದು ಸಣ್ಣ ಮಾತಿನಿರಿತ
ತಾಳದಾಯ್ತೆ ಪ್ರೇಮ ?
ಜೀವವೆರಡು ಕೂಡಿ ಉಂಡ
ಸ್ನೇಹವಾಯ್ತೆ ಹೋಮ ?
ಹಮ್ಮು ಬೆಳೆದು ನಮ್ಮ ಬಾಳು
ಆಯ್ತು ಎರಡು ಹೋಳು,
ಕೂಡಿಕೊಳಲಿ ಮತ್ತೆ ಪ್ರೀತಿ
ತಬ್ಬಿಕೊಳಲಿ ತೋಳು.
Youtube :
ರಚನೆ - ಎನ್ . ಎಸ್ . ಲಕ್ಷ್ಮಿನಾರಾಯಣ ಭಟ್ಟ
ಗಾಯಕರು - ಸಿ . ಎಸ್ . ಅಶ್ವಥ್
ಹಿಂದೆ ಹೇಗೆ ಚಿಮ್ಮುತಿತ್ತು
ಕಣ್ಣ ತುಂಬ ಪ್ರೀತಿ !
ಈಗ ಯಾಕೆ ಜ್ವಲಿಸುತ್ತಿದೆ
ಏನೋ ಶಂಕೆ ಭೀತಿ !
ಜೇನು ಸುರಿಯುತಿತ್ತು ನಿನ್ನ
ದನಿಯ ಧಾರೆಯಲ್ಲಿ,
ಕುದಿಯುತಿದೆ ಈಗ ವಿಷ
ಮಾತು ಮಾತಿನಲ್ಲಿ.
ಒಂದು ಸಣ್ಣ ಮಾತಿನಿರಿತ
ತಾಳದಾಯ್ತೆ ಪ್ರೇಮ ?
ಜೀವವೆರಡು ಕೂಡಿ ಉಂಡ
ಸ್ನೇಹವಾಯ್ತೆ ಹೋಮ ?
ಹಮ್ಮು ಬೆಳೆದು ನಮ್ಮ ಬಾಳು
ಆಯ್ತು ಎರಡು ಹೋಳು,
ಕೂಡಿಕೊಳಲಿ ಮತ್ತೆ ಪ್ರೀತಿ
ತಬ್ಬಿಕೊಳಲಿ ತೋಳು.
Youtube :
No comments :
Post a Comment